ಸುದ್ದಿ ಕಣಜ.ಕಾಂ
ಬೆಂಗಳೂರು: ಕೊರೊನಾ ಸೋಂಕಿನಿಂದ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ.
VIDEO REPORT
ಈ ಬಗ್ಗೆ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೊರೊನಾ ಸೋಂಕಿನಿಂದ ಬಿಪಿಎಲ್ ಕುಟುಂಬದ ವಯಸ್ಕರು ಮೃತಪಟ್ಟಲ್ಲಿ ಆ ಕುಟುಂಬದ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.