ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಗಾಂಧಿ ಪಾರ್ಕ್ ಗೆ ಹೈಟೆಕ್ ಸ್ಪರ್ಶ ನೀಡಲಾಗುತ್ತಿದೆ. ಕೋಟ್ಯಾಂತರ ಅನುದಾನದಲ್ಲಿ ಪ್ರಗತಿ ಕಾಮಗಾರಿಗಳು ನಡೆಯುತ್ತಿವೆ. ಅವುಗಳನ್ನು ವೀಕ್ಷಿಸಲು ಬಂದಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
https://www.suddikanaja.com/2021/06/23/upgradation-of-government-diploma-college-to-engineering-college/
ನೂರಾರು ವರ್ಷಗಳ ಇತಿಹಾಸ ಹೊಂದಿರುವ ಗಾಂಧಿ ಪಾರ್ಕ್ ಅನ್ನು ಈ ಹಿಂದೆಯೂ ಕೋಟ್ಯಾಂತರ ಹಣ ಖರ್ಚು ಮಾಡಿ ಪ್ರಗತಿ ಮಾಡಲಾಗಿದೆ. ಆದರೆ, ಸಾರ್ವಜನಿಕರ ಅನುಕೂಲಕ್ಕಾಗಿ ಉದ್ಯಾನವನ್ನು ಇನ್ನಷ್ಟು ಸುಂದರ ಮತ್ತು ಜನಸ್ನೇಹಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ವಾಯುವಿಹಾರಕ್ಕಾಗಿ ಬರುವ ಜನ, ಮನೋರಂಜನೆಗಾಗಿ ಬರುವ ಚಿಣ್ಣರು ಹೀಗೆ ಎಲ್ಲರಿಗೂ ಅನುಕೂಲ ದೃಷ್ಟಿಯಿಂದ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಏನೇನು ಇರಲಿದೆ | 3 ಕೋಟಿ ರೂಪಾಯಿ ವೆಚ್ಚದಲ್ಲಿ ಉದ್ಯಾನಕ್ಕೆ ಹೈಟೆಕ್ ಟಚ್ ನೀಡಲಾಗುವುದು. ಈಗಾಗಲೇ ಇದಕ್ಕಾಗಿ ಕ್ರಿಯಾಯೋಜನೆ ರೂಪಿಸಲಾಗಿದೆ. ಇಲ್ಲಿ ಬೆಳಕಿನ ವ್ಯವಸ್ಥೆ, ಫುಟ್ ಪಾತ್, ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ಪ್ರತ್ಯೇಕ ಸ್ಥಳ, ಈಜು ಕೊಳ, ಓಪನ್ ಜಿಮ್ ಇತ್ಯಾದಿ ಇರಲಿದೆ. ಬರುವ 151 ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾರಂಭಗೊಳ್ಳಲಿದೆ ಎಂದರು.
https://www.suddikanaja.com/2021/06/12/shivamogga-airport-work-will-complete-before-june/
ಸಿದ್ಧವಾಗಲಿದೆ ಥೀಮ್ ಪಾರ್ಕ್ | ಸ್ಮಾರ್ಟ್ ಸಿಟಿ ಯೋಜನೆ ಅಡಿ 8.50 ಕೋಟಿ ರೂಪಾಯಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರ ನಿರ್ವಹಣೆಯನ್ನು ಪಾಲಿಕೆ, ಖಾಸಗಿ ಇಲ್ಲವೇ ಖಾಸಗಿಯವರಿಂದ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶೀಘ್ರವೇ ನಿರ್ಧರಿಸಲಾಗುವುದು ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಫುಟ್ ಪಾತ್ ಅಭಿವೃದ್ಧಿ, ಯು.ಜಿ.ಡಿ, ಶೌಚಾಲಯ, ಮಕ್ಕಳ ರೈಲು ಮತ್ತಿತರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಯುಕ್ತ ಚಿದಾನಂದ್ ವಟಾರೆ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಉಪಸ್ಥಿತರಿದ್ದರು.
https://www.suddikanaja.com/2021/03/30/mayor-visit-to-rml-nagar/