ಸುದ್ದಿ ಕಣಜ.ಕಾಂ
ಶಿವಮೊಗ್ಗ: ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳದಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ.
READ | ಜೋಗಕ್ಕೆ ಪ್ರವಾಸಿಗರ ದಂಡು, ಪ್ರವಾಸಿ ತಾಣಗಳಿಗೆ ಜೀವಕಳೆ
ಒಟ್ಟು 16 ಪ್ರಕರಣಗಳನ್ನು ದಾಖಲಿಸಿ,1580 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ಈ ವೇಳೆ, ಕೋವಿಡ್ ಸುರಕ್ಷಾ ಕ್ರಮಗಳ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ರವಿರಾಜ್, ಪೊಲೀಸ್ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.