ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2021ಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ತಾಲ್ಲೂಕಿನ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 28 ರಂದು ಪ್ರಕಟಿಸಲಾಗಿರುತ್ತದೆ.
ಈ ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ, ಗ್ರಾಮ ಪಂಚಾಯಿತಿ ಕಚೇರಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಮತದಾರರು ಪರಿಶೀಲಿಸಬಹುದು ಎಂದು ಶಿವಮೊಗ್ಗ ತಾಲ್ಲೂಕು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.