ಬೆಳಗ್ಗೆ 10 ಗಂಟೆಯವರೆಗೆ ರೈತರಿಗೆ ಅಡ್ಡಿಪಡಿಸದಂತೆ ಪೊಲೀಸರಿಗೆ ಕೃಷಿ ಸಚಿವರ ಸೂಚನೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಲಾಕ್ ಡೌನ್ ಹಿನ್ನೆಲೆ ರೈತರಿಗೆ ಕೃಷಿ ಚಟುವಟಿಕೆಗೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದರು.

ನಗರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರವು ಕೊರೊನಾ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯದಾದ್ಯಂತ ಲಾಕ್ ಡೌನ್ ಘೋಷಿಸಿದೆ. ಈ ವೇಳೆ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಹಾಗೂ ಬೆಳೆದ ಬೆಳೆಯಿಂದ ರೈತರಿಗೆ ಉಂಟಾಗದಂತೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆ ತಮ್ಮ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದರು.
ಹೂವು ಹಣ್ಣು ತರಕಾರಿಗಳನ್ನು ಮಾರಾಟ ಮಾಡಲು ಹಾಗೂ ಬೀಜ ರಸಗೊಬ್ಬರಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಗಡಿಭಾಗಗಳಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

https://www.suddikanaja.com/2021/05/09/full-power-to-police-in-lock-down/

error: Content is protected !!