ಗುರುತಿನ ಚೀಟಿ ನವೀಕರಣ ಆಗದಿದ್ದರೂ ಕೋವಿಡ್ ಹಿನ್ನೆಲೆ ಸಿಗಲಿದೆ ಪರಿಹಾರ ಧನ, ಅರ್ಹತೆ ಏನು?

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆ ಮುಖ್ಯಮಂತ್ರಿ ಅವರು ಘೋಷಿಸಿರುವಂತೆ ಪರಿಹಾರ ಧನ ಸಿಗಲಿದೆ.

https://www.suddikanaja.com/2021/03/05/no-need-to-visit-rto-office-for-these-18-services/

ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ‌3 ಸಾವಿರ ರೂಪಾಯಿ ಪರಿಹಾರ ಧನವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್ ತಿಳಿಸಿದ್ದಾರೆ.

ಸಹಾಯ ಧನವನ್ನು ಒಂದು ಬಾರಿಗೆ ಕಾರ್ಮಿಕರ ಆಧಾರ್ ಕಾರ್ಡ್‌ಗೆ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮಾ ಮಾಡಲಾಗುವುದು.

  1. ಯಾರಿಗೂ ನಯಾ ಪೈಸೆ ಕೊಡಬೇಕಿಲ್ಲ | ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಅರ್ಹ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಈ ಪರಿಹಾರ ದೊರೆಯಲಿದೆ. ಯಾವುದೇ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಪರಿಹಾರ ಹಣಕ್ಕಾಗಿ ಫಲಾನುಭವಿಗಳು ಕಚೇರಿಗೆ ಭೇಟಿ ನೀಡುವ ಅಥವಾ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸುವ ಅಗತ್ಯವಿರುವುದಿಲ್ಲ.

ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯ ನವೀಕರಣವಾಗಿರಬೇಕು ಎಂಬ ನಿಯಮವಿಲ್ಲ. ಇಲಾಖೆಯಲ್ಲಿ ಫಲಾನುಭವಿಗಳ ದಾಖಲೆಗಳು ಲಭ್ಯವಿದೆ ಎಂದು ತಿಳಿಸಿದ್ದಾರೆ.

https://www.suddikanaja.com/2021/05/24/competition-between-gps-to-control-covid/

 

error: Content is protected !!