ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೊರೊನಾದಿಂದ ಚೇತರಿಸಿಕೊಳ್ಳುವ ಮಕ್ಕಳ ಆರೋಗ್ಯದ ಮೇಲೆ ಆಶಾ ಕಾರ್ಯಕರ್ತರು ನಿರಂತರ ಆರು ವಾರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಹಾಗೂ ಮಾನ್ಸೂನ್ ಸಿದ್ಧತೆಗಳ ಪರಿಶೀಲನೆ ನಡೆಸಿದರು.
https://www.suddikanaja.com/2021/05/07/mayor-raid-on-restaurant/
ಪಾಸಿಟಿವ್ ಬಂದ ಪಾಲಕರ ಮಕ್ಕಳ ಮೇಲೆ 6 ವಾರಗಳ ನಿಗಾ ಅಗತ್ಯ. ಯಾವುದೇ ಮಕ್ಕಳಿಗೆ 3 ದಿನಗಳಿಂದ ಜ್ವರ ನಿರಂತರವಾಗಿ ಬರುತ್ತಿದ್ದರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ಸೋಂಕಿತರಿಗೆ ಮನೆಯಲ್ಲಿಲ್ಲ ಐಸೋಲೇಷನ್ ಅವಕಾಶ | ಕಂಟೈನ್ಮೆಂಟ್ ವಲಯವನ್ನು ಕನಿಷ್ಠ 14 ದಿನಗಳಿಗಿಂತ ಮೊದಲು ತೆರವುಗೊಳಿಸಬಾರದು ಎಂದು ತಿಳಿಸಿದರು.
ಕಂಟೈನ್ಮೆಂಟ್ ವಲಯದಲ್ಲಿ ಕೊರೊನಾ ತಪಾಸಣೆಯನ್ನು ವ್ಯವಸ್ಥಿತವಾಗಿ ನಡೆಸಬೇಕು. ಇದಕ್ಕಾಗಿ ಸಂಚಾರಿ ವಾಹನದ ವ್ಯವಸ್ಥೆ ಮಾಡಬೇಕು. ಪಾಸಿಟಿವ್ ವ್ಯಕ್ತಿಗಳನ್ನು ಮನೆ ಐಸೋಲೇಷನ್ಗೆ ಅವಕಾಶ ನೀಡದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿ ಇರಿಸಬೇಕು.
ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳಲ್ಲಿ ಮನೆ ಐಸೋಲೇಷನ್ಗೆ ಹೆಚ್ಚಿನ ಅವಕಾಶ ನೀಡಿರುವುದು ಕಂಡು ಬಂದಿದ್ದು, ಇದನ್ನು ಸರಿಪಡಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/04/11/man-dead-due-to-corona/