ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ಲಿಂಗದಹಳ್ಳಿ ಸಮೀಪ ಕಾರೊಂದು ಸೋಮವಾರ ಅಪಘಾತಕ್ಕೀಡಾಗಿದ್ದು, ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಶಾಸಕರ ಮಾನವೀಯತೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೆ ಒಳಗಾಗಿದ್ದು, ಅದೇ ಮಾರ್ಗದಲ್ಲಿ ತೆರಳುತಿದ್ದ ಶಾಸಕರು ಕಾರು ನಿಲ್ಲಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ.
ಸ್ಥಳೀಯರ ನೆರವು ಪಡೆದು ತಗ್ಗಿಗೆ ಇಳಿದ ಕಾರನ್ನು ಹಿಂದಕ್ಕೆ ತಳ್ಳಲಾಳಗಿದೆ. ಕಾರಿನಲ್ಲಿದ್ದ ಪಲ್ಲವಿ ಜೈನ್ ಎಂಬುವವರಿಗೆ ಗಾಯಗಳಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಾಗರ ಆಸ್ಪತ್ರೆಗೆ ಕಳುಹಿಸಿದ್ದಾರೆ.
ನೆರವಿಗೆ ಇಳಿದ ಶಾಸಕರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.