ಸಿಬಿಎಸ್‍ಸಿ 12ನೇ ತರಗತಿ ಪರೀಕ್ಷೆ ರದ್ದು, ಮಹತ್ವದ ಸಭೆಯಲ್ಲಿ ಚರ್ಚೆಯಾಗಿದ್ದೇನು ಗೊತ್ತಾ?

 

 

ಸುದ್ದಿ ಕಣಜ.ಕಾಂ
ನವ ದೆಹಲಿ: ಕೊರೊನಾ ವೈರಸ್ ಸೋಂಕು ದೇಶದಾದ್ಯಂತ ಏರಿಕೆ ಆಗುತ್ತಿದ್ದು, ಈ ಕಾರಣದಿಂದಾಗಿ ಸಿಬಿಎಸ್‍ಸಿ 12ನೇ ತರಗತಿಯ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ವೈಯಕ್ತಿಕ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ‘ವಿದ್ಯಾರ್ಥಿ ಸ್ನೇಹಿ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

modi tweet on examsಮಂಗಳವಾರ ಮೋದಿ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಹಿಂದೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಕ್ರಿಯಲ್ ಅವರ ನೇತೃತ್ವದಲ್ಲಿ ಎಲ್ಲ ರಾಜ್ಯಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಪರೀಕ್ಷೆ ನಡೆಸುವ ಬಗ್ಗೆ ಅಭಿಪ್ರಾಯಗಳು ಕೇಳಿಬಂದಿದ್ದವು. ಇನ್ನೂ ಕೆಲವರು ವಿದ್ಯಾರ್ಥಿಗಳಿಗೆ ಪರೀಕ್ಷೆಗೂ ಮುನ್ನ ಲಸಿಕಾಕರಣಗೊಳಿಸುವಂತೆ ಮನವಿ ಮಾಡಿದ್ದರು. ಎಲ್ಲ ಅಂಶಗಳನ್ನು ಮನಗಂಡು ಕೇಂದ್ರ ಸರ್ಕಾರ ಪರೀಕ್ಷೆ ರದ್ದುಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ.

https://www.suddikanaja.com/2021/05/24/hospital-registration-cancel-if-demand-for-money-to-give-dead-body/

 

error: Content is protected !!