ಸುದ್ದಿ ಕಣಜ.ಕಾಂ
ಬೆಂಗಳೂರು: ರಾಜ್ಯ ಸರ್ಕಾರಿ ಮಹಿಳಾ ಸಿಬ್ಬಂದಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಶಿಶುಪಾಲನಾ ವರದಿಯನ್ನು ಮಂಜೂರು ಮಾಡಲಾಗಿದೆ. ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸ್ವಾಗತಿಸಿದ್ದಾರೆ.
https://www.suddikanaja.com/2020/11/17/veerashaiva-lingayat-development-corporation/
ಮಕ್ಕಳ ಪೋಷಣೆ, ಅನಾರೋಗ್ಯ ಸೇರಿದಂತೆ ಇನ್ನಿತರ ಕಾರಣಗಳಿಗಾಗಿ ತಮ್ಮ ಸೇವಾ ಅವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ (180 ದಿನಗಳು) ಶಿಶುಪಾಲನಾ ರಜೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಕ್ಕಳಿಗೆ 18 ವರ್ಷ ಆಗುವವರೆಗೆ ಈ ರಜೆ ಪಡೆಯಬಹುದಾಗಿದೆ.
ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಶಿಶುಪಾಲನಾ ರಜೆಯನ್ನು ಘೋಷಿಸಿದೆ. ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆ ಇಲ್ಲದಂತೆ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಯೋಜನೆಯಡಿ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಸಾಂದರ್ಭಿಕ ರಜೆಯ ಹೊರತಾಗಿ, ನಿಯಮಾನುಸಾರ ಪಡೆಯಲು ಅರ್ಹವಿರುವ ಅಸಾಧಾರಣ ರಜೆಯೂ ಒಳಗೊಂಡಂತೆ ಇತರೆ ರಜೆಯೊಂದಿಗೆ ಸಂಯೋಜಿಸಿ ಪಡೆಯಬಹುದಾಗಿದೆ. ಅಲ್ಲದೇ ಈ ರಜೆಯನ್ನು ಯಾವುದೇ ರಜೆ ಲೆಕ್ಕದಿಂದ ಕಳೆಯಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಶಿಶುಪಾಲನಾ ರಜೆಯ ಮಂಜೂರಾತಿಗಾಗಿ ಯಾವುದೇ ಪೂರಕ ದಾಖಲೆಗಳನ್ನು ನೀಡುವ ಅವಶ್ಯಕತೆ ಇರುವುದಿಲ್ಲ. ಸೇವಾ ಪುಸ್ತಕದಲ್ಲಿ ನಮೂದಿಸಿರುವ ಮಕ್ಕಳ ವಿವರಗಳ ಆಧಾರದ ಮೇಲೆ ಮಂಜೂರು ಮಾಡತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.
https://www.suddikanaja.com/2021/01/23/cm-instruction-to-give-earned-leave-encashment/