ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರಕ್ಕಿಂತ ಕಡಿಮೆಯಾಗಿದೆ. ಗುರುವಾರ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ 1,731 ಸೋಂಕಿತರಿದ್ದಾರೆ.
ಸಕ್ರಿಯ ಪ್ರಕರಣಗಳಲ್ಲಿ ನಿರಂತರ ಇಳಿಕೆಯಾಗುತ್ತಿದ್ದು, ಗುಣಮುಖರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇಂದು 343 ಜನ ಗುಣಮುಖರಾಗಿದ್ದಾರೆ.
193 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅದರಲ್ಲಿ 8 ವಿದ್ಯಾರ್ಥಿಗಳು, 1 ಕಾಲೇಜು ಇದ್ದಾರೆ. ನಾಲ್ಕು ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ರೋಗದ ಲಕ್ಷಣಗಳನ್ನು ಹೊಂದಿರುವ 3,540 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. 3,169 ವರದಿಗಳು ನೆಗೆಟಿವ್ ಇರುವುದು ದೃಢಪಟ್ಟಿದೆ.