ಶಿವಮೊಗ್ಗ ವಿಮಾನ ನಿಲ್ದಾಣ ಬ್ಲೂ ಪ್ರಿಂಟ್ ಬಗ್ಗೆ ಅಪಸ್ವರ, ವಿನ್ಯಾಸ ಬದಲಿಸದಿದ್ದರೆ ಕೋರ್ಟ್ ಮೊರೆಯ ಎಚ್ಚರಿಕೆ

 

 

ಸುದ್ದಿ ಕಣಜ.ಕಾಂ
HS sundreshಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣದ ನೀಲನಕ್ಷೆಯನ್ನು ಬದಲಿಸಬೇಕು. ಇಲ್ಲದಿದ್ದರೆ ನ್ಯಾಯಾಲಯ ಮೊರೆ ಹೋಗುವುದು ಅನಿವಾರ್ಯವಾಗಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಎಚ್ಚರಿಸಿದರು.

ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣವನ್ನು ಬಿಜೆಪಿಯ ಚಿಹ್ನೆಯಾದ ಕಮಲದಲ್ಲಿ ಮಾಡಲಾಗುತ್ತಿದೆ. ಈ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಲಾಗುತ್ತಿದೆ. ಹೀಗಾಗಿ, ಕೂಡಲೇ ಈ ನಿಟ್ಟಿನಲ್ಲಿ ನೀಲನಕ್ಷೆ ಬದಲಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪಕ್ಷದ ಫಂಡ್ ಅಲ್ಲ, ಜನರ ಟ್ಯಾಕ್ಸ್ | ವಿಮಾನ ನಿಲ್ದಾಣ ನಿರ್ಮಾಣ ಮಾಡುತ್ತಿರುವುದು ಜನರು ಪಾವತಿಸಿರುವ ತೆರಿಗೆಯಿಂದಲೇ ವಿನಹ ಪಕ್ಷದ ಫಂಡ್ ನಿಂದ ಅಲ್ಲ. ಹೀಗಾಗಿ, ಕಟ್ಟಡದ ವಿನ್ಯಾಸ ಬದಲಾಯಿಸಬೇಕು. ಜತೆಗೆ, ಜಿಲ್ಲೆಯ ಸಾಹಿತಿಗಳು ಅಥವಾ ಹೋರಾಟಗಾರರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಮುಖಂಡರಾದ ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ಚಂದ್ರಶೇಖರ್, ನಾಗರಾಜ್, ರಘು ಇತರರಿದ್ದರು.

https://www.suddikanaja.com/2021/03/02/sushasana-bhavana-in-shivamogga-for-public-grievance/

error: Content is protected !!