ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ‘169-ಎ’ರ ತೀರ್ಥಹಳ್ಳಿ-ಉಡುಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಆಗುಂಬೆ ಘಾಟಿಯ ರಸ್ತೆಯು ಕಿರಿದಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿದ್ದು ಭಾರೀ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆಯ ಬದಿಯ ಮಣ್ಣು ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ತೊಂದಯುಂಟಾಗುತ್ತಿದೆ. ಇದು ಅಪಘಾತಗಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅಕ್ಟೋಬರ್ 15ರ ವರೆಗೆ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಆದೇಶಿಸಲಾಗಿದೆ.
ಪರ್ಯಾಯ ಮಾರ್ಗದ ವಿವರ
- ಶಿವಮೊಗ್ಗ-ತೀರ್ಥಹಳ್ಳಿ- ಆಗುಂಬೆ- ಉಡುಪಿ ಮಾರ್ಗ
- ಶಿವಮೊಗ್ಗ-ತೀರ್ಥಹಳ್ಳಿ-ಉಂಟೂರುಕಟ್ಟೆ ಕೈಮರ-ಮಾಸ್ತಿಕಟ್ಟೆ-ಹುಲಿಕಲ್-ಕುಂದಾಪುರ
- ಶಿವಮೊಗ್ಗ-ತೀರ್ಥಹಳ್ಳಿ-ಕಮ್ಮರಡಿ-ಶೃಂಗೇರಿ-ಕೆರೆಕಟ್ಟೆ-ಕಾರ್ಕಳ