BREAKING NEWS | ಶಿವಮೊಗ್ಗದಲ್ಲಿ ಮುಂದುವರಿಯಲಿದೆ ಲಾಕ್‍ಡೌನ್, ಡಿಸಿಗೆ ಫುಲ್ ಪವರ್, ಯಡಿಯೂರಪ್ಪ ಘೋಷಣೆ

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಿಸುವ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಮಿತಿಯ ನಿರ್ಧಾರ ಹಾಗೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಲಹೆಗಳನ್ನು ಪಡೆದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಅಧಿಕವಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಜತೆಗೆ, ಇನ್ನಷ್ಟು ಕಠಿಣ ನಿಯಮಗಳನ್ನು ಹೇರುವಂತೆ ಸಿಎಂ ತಿಳಿಸಿದರು.

ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

error: Content is protected !!