ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಗ್ಗೆ 6ರಿಂದ 9ರ ವರೆಗೆ ಅವಕಾಶವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದರು.
ಅಡಿಕೆ ಮಂಡಿಯವರಿಗೆ ಪಾಸ್ | ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್ ನಲ್ಲಿ ಭಾಗವಹಿಸುವವರಿಗೆ ಪಾಸ್ ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಗ್ಗೆ 6ರಿಂದ 8ರ ವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.
ಆದ್ಯತಾ ವಲಯದವರಿಗೆ ಲಸಿಕೆ ಇನ್ನಷ್ಟು ವ್ಯವಸ್ಥಿತ | ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಆದ್ಯತಾ ವಲಯದ ಫಲಾನುಭವಿಗಳಿಗೆ ಹಂತ ಹಂತವಾಗಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತಗೊಳಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.