ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜೂನ್ 14 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 3ರ ವರೆಗೆ ತಾಲ್ಲೂಕಿನ ಗಾಜನೂರು ಡ್ಯಾಂ ಕುಡಿಯುವ ನೀರಿನ ಸ್ಥಾವರದ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.
ಗಾಜನೂರು 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಎಫ್-2, ಎಫ್-3, ಎಫ್-4 ಮತ್ತು ಎಫ್-5 ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.