ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜೂನ್ 27ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 4 ಫೀಡರ್ ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | ಸಾಗರ ಮುಖ್ಯರಸ್ತೆ, ಭಾರ್ಗವಿ ಪೆಟ್ರೋಲ್ ಬಂಕ್, ಆಲ್ಕೊಳ ಸರ್ಕಲ್, ಎಸ್.ಪಿ.ಕಚೇರಿ, ಪಂಪನಗರ, ಅಶೋಕನಗರ, ಎ.ಆರ್.ಬಿ.ಕಾಲೋನಿ, ಡಿ.ಎ.ಆರ್. ಮೈದಾನ, ಪೊಲೀಸ್ ಠಾಣೆ, ಸರ್ಕ್ಯೂಟ್ ಹೌಸ್, ಆಯನೂರು ಗೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.