ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲ್ಲೂಕಿನ ಸೋಗಾನೆ ಗ್ರಾಮದಲ್ಲಿರುವ ಉದ್ದೇಶಿತ ವಿಮಾನ ನಿಲ್ದಾಣದ ಆವರಣದಲ್ಲಿ ಹಾದು ಹೋಗಿರುವ 11 ಕೆವಿ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜೂನ್ 5ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಮಳೆ ಹಿನ್ನೆಲೆ ಎಲ್ಲ ತಾಲೂಕುಗಳಲ್ಲಿ ಕಂಟ್ರೋಲ್ ರೂಂ, ನೆರೆ ಹಾವಳಿ ಗ್ರಾಮ ಗುರುತಿಸಲು ಸೂಚನೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್ 1 ಉಂಬ್ಳೇಬೈಲು ಮತ್ತು ಎಫ್ 2 ಲಕ್ಕಿನಕೊಪ್ಪ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಸಂತೇಕಡೂರು, ಶ್ರೀರಾಮ ನಗರ, ರಾಂಪುರ, ಭಂಡಾರಿ ಕ್ಯಾಂಪ್, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಕಾಕನ ಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.suddikanaja.com/2021/04/28/tight-lockdown-in-shivamogga/