ಬೈಂದೂರು-ರಾಣೆಬೆನ್ನೂರು ರಸ್ತೆ ಕುಸಿತ ಸಂಭವ, ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ, ಎರಡೂವರೆ ತಿಂಗಳು ಸಂಚಾರ ನಿಷೇಧ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಕುಸಿತವಾಗುವ ಸಂಭವ ಇದೆ. ಹೀಗಾಗಿ, ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಜೂನ್ 16 ರಿಂದ ಆಗಸ್ಟ್ 30ರ ವರೆಗೆ ಅಥವಾ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧಿಸಿ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗದಲ್ಲಿ ಕೆಳಕಂಡಂತೆ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ಪರ್ಯಾಯ ಮಾರ್ಗ | ರಾಣೆಬೆನ್ನೂರು ಮಾರ್ಗದಿಂದ- ಶಿಕಾರಿಪುರ- ಹೊಸನಗರ- ಬೈಂದೂರು ಮಾರ್ಗದ ಮೂಲಕ ಹೋಗುವ ವಾಹನಗಳು ಹೊಸನಗರ- ನಗರ- ಮಾಸ್ತಿಕಟ್ಟೆ- ಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

error: Content is protected !!