ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
https://www.suddikanaja.com/2021/05/14/shivamogga-airport-will-complete-within-8-months/
ಬೆಂಗಳೂರು ಬಳಿಕ ಶಿವಮೊಗ್ಗದ ವಿಮಾನ ನಿಲ್ದಾಣವೇ ಸುಸಜ್ಜಿತ ಸೌಲಭ್ಯಗಳನ್ನು ಹೊಂದಿರಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಎಂದು ತಿಳಿಸಿದರು.
ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸವಾರ್ಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.
11,500 ಮೀಟರ್ ಕಾಂಪೌಂಡ್ ಪೂರ್ಣ | ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15,900 ಮೀಟರ್ ಪೈಕಿ 11,500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ್ ನಾಯ್ಕ್, ಆರಗ ಜ್ಞಾನೇಂದ್ರ, ಎಸ್.ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉಪಸ್ಥಿತರಿದ್ದರು.
https://www.suddikanaja.com/2021/05/29/shivamogga-airport-will-finish-within-dead-line/