ಶಿವಮೊಗ್ಗದಲ್ಲಿ ಮುಂದುವರಿಯಲಿದೆ ಇನ್ನೊಂದು ವಾರ ಲಾಕ್ ಡೌನ್, ಸಭೆಯಲ್ಲಿ ಸಿಎಂ ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ಇನ್ನೂ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಶಿವಮೊಗ್ಗ ಸೇರಿ ಎಂಟು ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ ಡೌನ್ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ.

https://www.suddikanaja.com/2021/05/29/one-week-complete-lockdown-in-shivamogga/

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿದ್ದು, ಒಂದು ವಾರ ಲಾಕ್ ಡೌನ್ ವಿಸ್ತರಣೆಯ ಬಗ್ಗೆ ನಿರ್ಧರಿಸಲಾಗಿದೆ.
ಸಂಜೆ ಹೊತ್ತಿಗೆ ಲಾಕ್ ಡೌನ್ ರೂಪುರೇಷೆ ಖಚಿತ | ಇಂದು ಸಂಜೆಯ ಹೊತ್ತಿಗೆ ಲಾಕ್ ಡೌನ್ ರೂಪುರೇಷೆ ಖಚಿತವಾಗಲಿದೆ. ಈ ಕುರಿತು ಮುಖ್ಯಮಂತ್ರಿಗಳು ಮಾತನಾಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಯಾವ ಜಿಲ್ಲೆಗಳಲ್ಲಿ ಲಾಕ್ ಡೌನ್ | ಶಿವಮೊಗ್ಗ, ಮೈಸೂರು, ಹಾಸನ, ತುಮಕೂರು, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಅಧಿಕವಿದ್ದು, ಒಂದು ವಾರ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಎಸ್.ಪಿ. ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಡಿಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ ಉಪಸ್ಥಿತರಿದ್ದರು.

https://www.suddikanaja.com/2021/01/03/decision-to-reject-the-kasturirangan-report/

error: Content is protected !!