ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್ ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲ ರೀತಿಯ ಅಂಗಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 5 ಗಂಟೆಯವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
https://www.suddikanaja.com/2020/12/27/open-heart-surgery-in-narayana-hrudayalaya-shivamogga/
ಈ ಆದೇಶ ಜುಲೈ 5ರ ಬೆಳಗ್ಗೆ 5 ಗಂಟೆವರೆಗೆ ಜಾರಿಯಲ್ಲಿರಲಿದೆ. ಕಂಟೈನ್ಮೆಮೆಂಟ್ ವಲಯದಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಹವಾನುಕೂಲಿತ ಅಂಗಡಿಗಳು, ಹವಾನುಕೂಲಿತ ಶಾಪಿಂಗ್ ಕಾಪ್ಲೆಂಕ್ಸ್ ಗಳು, ಮಾಲ್ ಗಳಿಗೆ ಅನುಮತಿ ನೀಡಲಾಗಿಲ್ಲ. ಎಲ್ಲ ವಸ್ತುಗಳ ಹೋಮ್ ಡೆಲಿವರಿಗೆ ಸಂಪೂರ್ಣ ಅವಕಾಶ ನೀಡಲಾಗಿದೆ. ಎಲ್ಲ ರೀತಿಯ ಕೈಗಾರಿಕೆಗಳಿಗೆ ಶೇ.50ರಷ್ಟು ಸಿಬ್ಬಂದಿಯನ್ನು ಬಳಸಿಕೊಂಡು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಗಾಮೆರ್ಂಟ್ ಕೈಗಾರಿಕೆ ಶೇ.30ರಷ್ಟು ಸಿಬ್ಬಂದಿಯನ್ನು ಮಾತ್ರ ಬಳಸಬಹುದಾಗಿದೆ ಎಂದು ಹೇಳಿದ್ದಾರೆ.
ಏಸಿ ಆನ್ ಮಾಡುವಂತಿಲ್ಲ, ಮದ್ಯ ಪಾರ್ಸೆಲ್ ಅವಕಾಶ | ಹೊಟೇಲ್, ರೆಸ್ಟೋರೆಂಟ್, ಬಾರ್ ಗಳು ಬೆಳಗ್ಗೆ 6ರಿಂದ ಸಂಜೆ 5ರ ವರೆಗೆ ಶೇ. 50ರಷ್ಟು ಸಾಮರ್ಥ್ಯವನ್ನು ಬಳಸಿಕೊಂಡು ವಹಿವಾಟು ನಡೆಸಬಹುದು. ಆದರೆ ಮದ್ಯವನ್ನು ಸ್ಥಳದಲ್ಲಿಯೇ ಸೇವಿಸಲು ಅವಕಾಶವಿರುವುದಿಲ್ಲ.
ನೈಟ್, ವೀಕೆಂಡ್ ಕರ್ಫ್ಯೂ | ಪ್ರತಿ ದಿನ ರಾತ್ರಿ 7ರಿಂದ ಮರುದಿನ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಅವಶ್ಯಕ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ವೈದ್ಯಕೀಯ, ಸರಕು ಸಾಗಾಣಿಕೆ ವಾಹನಗಳ ಸಂಚಾರ, ಬಸ್, ರೈಲು ಸಂಚಾರ, ಹೋಮ್ ಡೆಲಿವರಿ ಇತ್ಯಾದಿ ಅವಶ್ಯಕ ಚಟುವಟಿಕೆಗಳಿಗೆ ಅವಕಾಶವಿರುವುದು. ಇದೇ ರೀತಿ ವಾರಾಂತ್ಯದಲ್ಲಿ ಅಂದರೆ ಶುಕ್ರವಾರ ಸಂಜೆ 7ರಿಮದ ಸೋಮವಾರ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರುವುದು ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರ ಲಾಕ್ ಡೌನ್ ಸಡಿಲಿಕೆ ಮಾಡಿದ್ದರೂ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು ಕಡ್ಡಾಯವಾಗಿದ್ದು, ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ತಿಳಿಸಿದ್ದಾರೆ.
https://www.suddikanaja.com/2020/11/07/sharavathi-water-cm-bsy/