ಸುದ್ದಿ ಕಣಜ.ಕಾಂ
ಭದ್ರಾವತಿ: ನಗರದ ಸಂಚಾರ ಪೊಲೀಸ್ ಠಾಣೆಯ ಠಾಣಾಧಿಕಾರಿಯೊಬ್ಬರನ್ನು ಕೊರೊನಾ ಶುಕ್ರವಾರ ಬಲಿ ಪಡೆದಿದೆ.
ಮೃತರು ಪತ್ನಿ, ಪುತ್ರರನ್ನು ಅಗಲಿದ್ದಾರೆ. 14ರಂದು ಅನಾರೋಗ್ಯಕ್ಕೆ ತುತ್ತಾಗಿದ್ದ ಇವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೋಮ್ ಐಸೋಲೇಷನ್ ನಲ್ಲಿದ್ದುಕೊಂಡೇ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಉಸಿರಾಟ ಸಮಸ್ಯೆ ಕಂಡುಬಂದ ಕಾರಣಕ್ಕೆ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಚಿಕಿತ್ಸೆ ಫಲ ನೀಡದೇ ಮೃತಪಟ್ಟಿದ್ದಾರೆ.