ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜನ್ನು ಎಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪವಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
https://www.suddikanaja.com/2021/01/17/jobs-in-kptcl-for-diploma-engineering-graduates/
ಗೋಪಾಳದಲ್ಲಿ 14 ಎಕರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು ಕ್ಯಾಂಪಸ್ಗೆ ಬುಧವಾರ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.
ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.
ಕಾಲೇಜು ಕಟ್ಟಡಕ್ಕೆ ಹೈಟೆಕ್ ಸ್ಪರ್ಶ | ಮೂರು ದಶಕಗಳ ಹಿಂದೆ ಆರಂಭವಾಗಿರುವ ರಾಜ್ಯದ ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ದುಸ್ಥಿತಿಯಲ್ಲಿದೆ. ಕಟ್ಟಡ ಸೋರುತ್ತಿದ್ದು, ಅದನ್ನು ಸರಿಪಡಿಸಬೇಕಾಗಿದೆ. ಕ್ಯಾಂಪಸ್ ಒಳಗೆ ರಸ್ತೆ, ಒಳಚರಂಡಿ, ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕಾಗಿದೆ. ವಿದ್ಯಾರ್ಥಿನಿಯರ ಹಾಸ್ಟೆಲ್, ಶಿಕ್ಷಕರ ವಸತಿ ದುರಸ್ಥಿ ಹಾಗೂ ನೂತನ ವಸತಿ ಸಮುಚ್ಚಯ ನಿರ್ಮಾಣ ಮಾಡಬೇಕಿದೆ. ಕಾಲೇಜಿನ ಸುತ್ತ ಕಂಪೌಂಡ್ ನಿರ್ಮಿಸಬೇಕಿದೆ ಎಂದರು.
ಟ್ಯಾಬ್ ವಿತರಣೆ | ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಯೋಜನೆಗೆ ಸಂಸತ್ ಸದಸ್ಯರು ಈ ಸಂದರ್ಭದಲ್ಲಿ ಚಾಲನೆ ನೀಡಿದರು. ಈ ಮೊದಲು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸೀಮಿತವಾಗಿದ್ದ ಈ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಬಿ.ವೈ.ಅರುಣಾ ದೇವಿ, ಕಾಲೇಜಿನ ಪ್ರಾಂಶುಪಾಲರಾದ ಉಮಾ ಉಪಸ್ಥಿತರಿದ್ದರು.
https://www.suddikanaja.com/2021/02/02/tadagani-women-polytechnic-college-name-change-order-viral/