ಜೋಗದ ಬಗ್ಗೆ ಮಹತ್ವದ ಚರ್ಚೆ, ತಳಕಳಲೆಯಲ್ಲಿ ತಲೆ ಎತ್ತಲಿದೆ ವಾಟರ್ ಸ್ಪೋರ್ಟ್ಸ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಾಗರ ಸಮೀಪದ ತಳಕಳಲೆ ಸಮೀಪದಲ್ಲಿ ವಾಟರ್ ಸ್ಪೋರ್ಟ್ಸ್ ಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಜಲ ಕ್ರೀಡೆಯ ವ್ಯವಸ್ಥಿತ ನಿರ್ವಹಣೆ ನಿಟ್ಟಿನಲ್ಲೂ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

https://www.suddikanaja.com/2021/02/21/demand-for-sports-authority-of-india-sub-center-in-shivamogga/

ಶಿವಮೊಗ್ಗ ಸಮೀಪದ ಸಕ್ರೆಬೈಲು, ಅಕ್ಕಮಹಾದೇವಿ ಜನ್ಮಸ್ಥಳ ಉಡುಗುಣಿ, ನಗರದ ಕೋಟೆ, ಶಿವಪ್ಪನಾಯಕನ ಅರಮನೆ ಮುಂತಾದ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದಾಗಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ ದೊರೆತು ಜನರ ಜೀವನ ಮಟ್ಟ ಸುಧಾರಣೆಗೊಳ್ಳಲಿದೆ. ಇದರಿಂದ ಪರೋಕ್ಷವಾಗಿ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದರು.
5 ಕೋಟಿ ನಷ್ಟ ಪ್ರವಾಸೋದ್ಯಮ ಇಲಾಖೆಯಿಂದ ಭರ್ತಿ | ಪ್ರತಿ ಶನಿವಾರ, ಭಾನುವಾರ ಹಾಗೂ ಹಬ್ಬ ಹರಿದಿನಗಳಲ್ಲಿ ಜಲಪಾತ ವೀಕ್ಷಿಸಲು ಅವಕಾಶ ಒದಗಿಸಲಾಗುವುದು. ಈ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಆಗುವ ನಷ್ಟವನ್ನು ಪ್ರವಾಸೋದ್ಯಮ ಇಲಾಖೆ ಭರಿಸಲಿದೆ ಎಂದು ತಿಳಿಸಿದರು.
ಜಲಪಾತಕ್ಕೆ ಜಲಾಶಯದ ನೀರನ್ನು ಹರಿ ಬಿಡುವುದರಿಂದ ವಿದ್ಯುತ್ ಉತ್ಪಾದನೆಯಲ್ಲಿ 5 ಕೋಟಿ ರೂ.ಗಳ ನಷ್ಟ ಉಂಟಾಗಲಿದೆ. ಇದನ್ನು ಪ್ರವಾಸೋದ್ಯಮ ಇಲಾಖೆ ಭರಿಸುವ ಬಗ್ಗೆ ಕೆಪಿಟಿಸಿಎಲ್‍ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

https://www.suddikanaja.com/2021/05/14/shivamogga-airport-will-complete-within-8-months/

ನಿತ್ಯ 20 ಸಾವಿರ ಪ್ರವಾಸಿಗರ ಆಗಮನ ಸಾಧ್ಯತೆ | ಜೋಗದ ಸುತ್ತಮುತ್ತಲಲ್ಲಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗಳು ಭರದಿಂದ ಸಾಗಿದೆ. ಈ ಎಲ್ಲ ಕಾಮಗಾರಿಗಳು ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಎಲ್ಲ ಕಾಮಗಾರಿ ಮುಗಿದ ಬಳಿಕ ನಿತ್ಯ 20 ಸಾವಿರ ಪ್ರವಾಸಿಗರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸಹ್ಯಾದ್ರಿ ಕಾಲೇಜಿನಲ್ಲಿ ನಿರ್ಮಿಸಲಾಗುವ ಕ್ರೀಡಾಂಗಣದ ಮಾಲೀಕತ್ವ ಕುವೆಂಪು ವಿಶ್ವವಿದ್ಯಾಲಯದ್ದಾಗಿರಲಿದೆ. ಅದರ ವ್ಯವಸ್ಥಿತ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೇ ಪ್ರಸ್ತುತ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಹಾಗೂ ವಸತಿ ನಿಲಯಕ್ಕೆ ಪೂರಕವಾಗಿ ಇನ್ನಷ್ಟು ಅಗತ್ಯ ಕಟ್ಟಡ ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಈ ಸಂಬಂಧ ಕ್ರಿಯಾ ಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಕುವೆಂಪು ವಿವಿ ಕುಲಪತಿ ಪ್ರೊ.ವೀರಭದ್ರಪ್ಪ, ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಭೂಮಿ ಪುತ್ರ ಕನ್ಸಲ್‍ಟೆನ್ಸಿಯ ವ್ಯವಸ್ಥಾಪಕ ಅಲೋಕ್ ಶೆಟ್ಟಿ ಸೇರಿ ಕುವೆಂಪು ವಿವಿಯ ಸಿಂಡಿಕೇಟ್ ಸದಸ್ಯರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.

https://www.suddikanaja.com/2021/05/27/sahyadri-college-student-association-refused-to-give-lad-for-sports-purpose/

error: Content is protected !!