ಶಿವಮೊಗ್ಗದಲ್ಲಿ ಕೋವಿಡ್ ಲಸಿಕೆ ಅಭಿಯಾನ ದಿಢೀರ್ ಸ್ಥಗಿತ, ಸರ್ಕಾರದ ಕ್ರಮಕ್ಕೆ ಖಂಡನೆ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ನಗರದಲ್ಲಿ ದಿಢೀರ್ ಲಸಿಕೆ ಅಭಿಯಾನ ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮಂಗಳವಾರ ಪ್ರತಿಭಟನೆ ಮಾಡಲಾಯಿತು.
ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರ ಲಸಿಕಾ ಕೇಂದ್ರದ ಮುಂದೆ ಪ್ರತಿಭಟಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹಿಡಿ ಶಾಪ ಹಾಕಿದರು.

READ | ಶಿವಮೊಗ್ಗ ಮೃಗಾಲಯ ಮಂಗಳವಾರವೂ ಓಪನ್

ಕೇಂದ್ರ ಬಿಜೆಪಿ ಸರ್ಕಾರ ದೇಶದಾದ್ಯಂತ ಎರಡೂ ಕೊರೊನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು‌.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ಪ್ರಮುಖರಾದ ಎಸ್.ಕುಮಾರೇಶ್, ಉಮೇಶ್ ಬಾಳೆಗುಂಡಿ, ಅರುಣ್ ನವುಲೆ, ವೆಂಕಟೇಶ್ ಕಲ್ಲೂರು, ರಾಹುಲ್ ಸೀಗೆಹಟ್ಟಿ, ಶ್ರೀನಿವಾಸ್, ಪವನ್, ರಾಕೇಶ್, ಇರ್ಫಾನ್, ಕ್ಲೇಮೆಂಟ್ ಇತರರು ಉಪಸ್ಥಿತರಿದ್ದರು.

error: Content is protected !!