ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಜುಲೈ 9ರಿಂದ ಪುನರಾರಂಭವಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
https://www.suddikanaja.com/2021/07/02/covid-negative-report-mandatory-for-train-journey/
ಕೋವಿಡ್ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಹೇರಲಾಗಿದ್ದ ಲಾಕ್ ಡೌನ್ ಹಿನ್ನೆಲೆ ಮ್ಯೂಸಿಯಂಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಲಾಕ್ ಡೌನ್ ಸಡಿಲೀಕರಣ ಬಳಿಕ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗಿದೆ.
ಜುಲೈ 9ರಿಂದ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮ್ಯೂಸಿಯಂ ತೆರೆದಿರಲಿದೆ. ಮಂಗಳವಾರ ಮಾತ್ರ ರಜೆ ಇರಲಿದೆ ಎಂದು ತಿಳಿಸಲಾಗಿದೆ.
ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ | ಕೊರೊನಾ ವೈರಸ್ ಸೋಂಕು ತಗುಲುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯ ಸರ್ಕಾರ ಸೂಚಿಸಿರುವಂತೆ ಕಡ್ಡಾಯವಾಗಿ ಪ್ರವಾಸಿಗರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು ಎಂದು ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರವಾಲ್ ತಿಳಿಸಿದ್ದಾರೆ.
ಪ್ರಸಿದ್ಧ ಧಾರಾವಾಹಿ | ಆರ್.ಕೆ. ನಾರಾಯಣ್ ಬರಹ ಆಧಾರಿತ ಮಾಲ್ಗುಡಿ ಡೇಸ್ ಧಾರಾವಾಹಿಯ ಕೆಲವು ಕಂತುಗಳನ್ನು ಶಿವಮೊಗ್ಗ ಜಿಲ್ಲೆಯ ಅರಸಾಳು ರೈಲ್ವೆ ನಿಲ್ದಾಣದಲ್ಲೂ ಚಿತ್ರೀಕರಿಸಲಾಗಿತ್ತು. ಅದರ ಸವಿನೆನಪಿಗಾಗಿ ಈ ನಿಲ್ದಾಣದಲ್ಲಿ `ಮಾಲ್ಗುಡಿ’ ಹೆಸರಿನ ಮ್ಯೂಸಿಯಂ ಸ್ಥಾಪಿಸಲಾಗಿದೆ. ಸಾಕಷ್ಟು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿ ಧಾರಾವಾಹಿಯ ಸನ್ನಿವೇಶಗಳನ್ನು ಮೆಲುಕು ಹಾಕುತ್ತಾರೆ.
https://www.suddikanaja.com/2021/06/30/property-tax-relaxation-period-extended/