ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಶಿವಮೊಗ್ಗವೊಂದರಲ್ಲೇ 63 ಜನರು ಸೋಂಕಿಗೆ ಗುರಿಯಾಗಿದ್ದು, ಜಿಲ್ಲೆಯಲ್ಲಿ ಶುಕ್ರವಾರ 141 ಪ್ರಕರಣಗಳು ಪತ್ತೆಯಾಗಿವೆ.
https://www.suddikanaja.com/2020/11/11/cm-formula-does-to-increase-the-punishment-act/
ಭದ್ರಾವತಿಯಲ್ಲಿ 27 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಶಿಕಾರಿಪುರ 5, ತೀರ್ಥಹಳ್ಳಿ 8, ಸೊರಬ 9, ಹೊಸನಗರ 4, ಸಾಗರ 19, ಬಾಹ್ಯ ಜಿಲ್ಲೆಯ 6 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಜಿಲ್ಲೆಯಲ್ಲಿ 141 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅದೇ ಗುರುವಾರ 98 ಪ್ರಕರಣಗಳು ಪತ್ತೆಯಾಗಿದ್ದವು. 82 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮೂರು ಜನ ಮೃತಪಟ್ಟಿದ್ದಾರೆ.
ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 146 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ, ಡಿಸಿಎಚ್ಸಿ 89, ಕೋವಿಡ್ ಕೇರ್ ಸೆಂಟರ್ ನಲ್ಲಿ 167, ಖಾಸಗಿ ಆಸ್ಪತ್ರೆಯಲ್ಲಿ 117, ಹೋಮ್ ಐಸೋಲೇಷನ್ ನಲ್ಲಿ 390 ಹಾಗೂ ಟ್ರಿಯೇಜ್ ಕೇಂದ್ರದಲ್ಲಿ 49 ಸೋಂಕಿತರಿದ್ದಾರೆ. 958 ಸಕ್ರಿಯ ಪ್ರಕರಣಗಳಿವೆ.
ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ರೋಗದ ಲಕ್ಷಣಗಳನ್ನು ಹೊಂದಿರುವ 3,354 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. 3,019 ವರದಿಗಳು ನೆಗೆಟಿವ್ ಇರುವುದು ದೃಢಪಟ್ಟಿದೆ.
https://www.suddikanaja.com/2021/06/17/corona-positivity-decline/