ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸರಕು ಸಾಗಾಣಿಕೆ ವಾಹನಗಳಲ್ಲಿ ಕೃಷಿ ಪರಿಕರಗಳನ್ನಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ 2020 ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಕೆ ನೀಡಿದರು.
https://www.suddikanaja.com/2021/07/17/go-shala-in-shivamogga/
ಡಿಸಿ ಕಚೇರಿ ಸಭಾಂಗಣದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶನಿವಾರ ಏರ್ಪಡಿಸಿದ್ದ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಠಿಣ ಕ್ರಮ, ದಂಡ | ಸಂಶಯಾಸ್ಪದ ಸಾಗಾಣಿಕೆ ಹಾಗೂ ಕಸಾಯಿಖಾನೆಗೆ ಕೊಂಡೊಯ್ಯುವುದು ತಿಳಿದುಬಂದಲ್ಲಿ ಅಂತಹ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ತಪ್ಪಿತಸ್ಥ ವ್ಯಕ್ತಿಗಳ ವಿರುದ್ಧ 5-7 ವರ್ಷಗಳ ಸೆರೆವಾಸ, 10 ಲಕ್ಷ ರೂ.ಗಳವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದರು.
https://www.suddikanaja.com/2021/01/31/district-sc-st-meeting-by-police-department/
ತಾಲೂಕು ಅಧಿಕಾರಿಗಳೇ ಹೊಣೆಗಾರರು | ತಾಲೂಕುಗಳಲ್ಲಿ ತಹಸೀಲ್ದಾರರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಚೆಕ್ಪೋಸ್ಟ್ಗಳ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಣಿಕೆ ವಾಹನಗಳ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲು ಅಧಿಕಾರ ಹೊಂದಿರಲಿದೆ. ಯಾವುದೇ ಮೂಲದಿಂದ ಅಕ್ರಮ ಜಾನುವಾರು ಸಾಗಾಣಿಕೆ ನಡೆದದ್ದು ಕಂಡುಬಂದಲ್ಲಿ ಸಂಬಂಧಿತ ತಾಲೂಕುಗಳ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಕಸಾಯಿಖಾನೆ ಬಂದ್ | ಬಕ್ರೀದ್ ಹಬ್ಬದಂದು ಕಡ್ಡಾಯವಾಗಿ ಕಸಾಯಿಖಾನೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗುವುದು ಎಂದರು.
ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ಎಸ್.ವಟಾರೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಎಲಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ರೇಖಾ ಉಪಸ್ಥಿತರಿದ್ದರು.
https://www.suddikanaja.com/2021/05/07/mayor-raid-on-restaurant/