ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ (ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್) ನಡೆಸಲು ಅನುಮತಿ ನೀಡಿದೆ.
10,000 ಸೀಟ್ | ಮುಕ್ತ ಹಾಗೂ ದೂರ ಶಿಕ್ಷಣ ಮಾದರಿಯಡಿ ಎಂಬಿಎ ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾನಿಲಯ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. 2021-22ನೇ ಸಾಲಿಗೆ ಮುಕ್ತ ಹಾಗೂ ದೂರ ಶಿಕ್ಷಣ ಕಲಿಕಾ ವಿಧಾನದಡಿ ಎಂಬಿಎ ಕೋರ್ಸ್ ಗೆ(ಜನರಲ್ ಅಡ್ಮಿನಿಸ್ಟ್ರೇಷನ್) 10,000 ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿ ನೀಡಿದೆ.
READ | ಯೂನಿಯನ್ ಬ್ಯಾಂಕ್ ಎಟಿಎಂ ಧ್ವಂಸ, ಕಳ್ಳರ ವಿಫಲ ಯತ್ನ
ಕುಲಪತಿಗಳ ಸಂತಸ | ಕೆ.ಎಸ್.ಒ.ಯುಗೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಎಐಸಿಟಿಇಯಿಂದ ಮಾನ್ಯತೆ ಪಡೆದ ದೇಶದ ಮೊದಲ ವಿಶ್ವವಿದ್ಯಾನಿಲಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಎಂದು ತಿಳಿಸಿದ್ದಾರೆ.
ಮುಕ್ತ ಕಂಠದಿಂದ ಯಡಿಯೂರಪ್ಪ ಅವರನ್ನು ಹೊಗಳಿದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್