ಸುದ್ದಿ ಕಣಜ.ಕಾಂ
ಬೆಂಗಳೂರು: ಸರ್ಕಾರಿ ನೌಕರರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಗುವ ಸಾಧ್ಯತೆ ಇದೆ. ಈ ಮೂಲಕ ಹಲವು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ರಾಜ್ಯ ಬಜೆಟ್ | ಷಡಕ್ಷರಿ ಸಲ್ಲಿಸಿದ ಸರ್ಕಾರಿ ನೌಕರರ ಡಿಮ್ಯಾಂಡ್ಗಳಾವವು ಗೊತ್ತಾ? ಇಲ್ಲಿದೆ ಪಟ್ಟಿ
ಕ್ಯಾಶ್ ಲೆಸ್ ಯೋಜನೆಗೆ ಒಪ್ಪಿಗೆ ಸಿಕ್ಕರೆ ರಾಜ್ಯದಲ್ಲಿ ನೌಕರರು ಮತ್ತವರ ಅವಲಂಬಿತರು ಸೇರಿ ಸುಮಾರು 25 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅಭಯ | ನಗದು ರಹಿತ ಚಿಕಿತ್ಸೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದ್ದು, ಜಾರಿಗೆ ತರುವ ಭರವಸೆ ನೀಡಿದ್ದಾರೆ. ಸಂಪುಟದಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎಂದು ಷಡಕ್ಷರಿ ತಿಳಿಸಿದ್ದಾರೆ.
https://www.suddikanaja.com/2020/11/24/epf-pension-amount/