ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪುರಲೆ ಕೆರೆಗೆ ಹಾರಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಪುರಲೆ ನಿವಾಸಿ ಹರೀಶ್ (26) ಎಂಬಾತ ಕೆರೆಗೆ ಹಾರಿದ್ದು, ರಾತ್ರಿ 8 ಗಂಟೆಗೆ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಕರೆ ಮಾಡಿದ್ದಾರೆ. ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಆರ್.ಅಶೋಕ್, ಠಾಣಾಧಿಕಾರಿ ಕೆ.ಎನ್.ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.