ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಮೀಪದ ಸೋಗಾನೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಬರುವ ಏಪ್ರಿಲ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
https://www.suddikanaja.com/2021/03/31/army-tanker-and-air-jet-install-in-mrs-circle/
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ವರ್ಚ್ಯುವಲ್ ಹೋಸ್ಟಿಂಗ್ ಮೂಲಕ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
384 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಇಲ್ಲಿ ಏರ್ ಬಸ್ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂತೆ ನಿಲ್ದಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಕೈಗಾರಿಕೆಗೂ ಪೂರಕ ವಿಮಾನ ನಿಲ್ದಾಣ | ಇದರಿಂದಾಗಿ ನೆರೆಯ ಜಿಲ್ಲೆಗಳ ಆರ್ಥಿಕ ಸ್ಥಿತಿಯಲ್ಲಿ ಪರಿಣಾಮಕಾರಿ ಬದಲಾವಣೆ ಆಗುವ ನಿರೀಕ್ಷೆ ತಮಗಿದೆ. ಇದೀಗ 258 ಕೋಟಿ ರೂಪಾಯಿಗಳ ವೆಚ್ಚದ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.
READ | ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕನ ಹೆಸರು ನಾಮಕರಣ, ಸಿಎಂ ಯಡಿಯೂರಪ್ಪ ಘೋಷಣೆ
ಕೈಗಾರಿಕೋದ್ಯಮಿಗಳು ಸಕಾಲದಲ್ಲಿ ಆಗಮಿಸಿ, ಹಿಂದಿರುಗಲು ಅನುಕೂಲವಾಗುವಂತೆ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯುವಂತಾಗಲು ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳ ಸಹಕಾರ, ಅನುಷ್ಠಾನ ಕಾರ್ಯದಲ್ಲಿ ಅಧಿಕಾರಿ, ಸಿಬ್ಬಂದಿ ಪಾತ್ರ ಪ್ರಧಾನವಾದುದ್ದಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನ ಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶಾಸಕರಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಎಸ್.ಕುಮಾರ್ ಬಂಗಾರಪ್ಪ, ಬಿ.ಕೆ.ಸಂಗಮೇಶ್ವರ್, ಕೆ.ಬಿ.ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನಕುಮಾರ್, ರುದ್ರೇಗೌಡ, ಆಯನೂರು ಮಂಜುನಾಥ್ ಉಪಸ್ಥಿತರಿದ್ದರು.
https://www.suddikanaja.com/2021/01/02/shivamogga-airport-work-will-compete-in-2021/