ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಚ್ರ್ಯುವಲ್ ಮೂಲಕ ಹಲವು ಕಾರ್ಯಕ್ರಮಗಳಿಗೆ ಹಸಿರು ನಿಶಾನೆ ತೋರಿದ್ದು, ಅವುಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಟಾಪ್ 10 ಏನೇನು ಗಿಫ್ಟ್
- ಜಿಲ್ಲೆಯ ರೈತರ ಹೊಲಗಳಿಗೆ ನೀರುಣಿಸುವ ಹಲವು ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ.
- ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ 384 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಮುಂದಿನ ಏಪ್ರಿಲ್ ವೇಳೆಗೆ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ. ಇಲ್ಲಿ ಏರ್ ಬಸ್ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂತೆ ನಿಲ್ದಾಣವನ್ನು ನಿರ್ಮಿಸಲಾಗುತ್ತಿದೆ. 258 ಕೋಟಿ ರೂಪಾಯಿಗಳ ವೆಚ್ಚದ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ
- ತುಂಗಭದ್ರಾ ನದಿಯಿಂದ ನೀರನ್ನೆತ್ತಿ ಶಿಕಾರಿಪುರ ತಾಲೂಕಿನ ತಾಳಗುಂದ, ಉಡುಗಣಿ, ಹೊಸೂರು ಹೋಬಳಿಗಳ 249 ಕೆರೆಗಳಿಗೆ ಹಾಗೂ ಹಿರೇಕೆರೂರು ತಾಲೂಕಿನ 6 ಕೆರೆಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು 850 ಕೋಟಿ ರೂ.ಗಳ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ.
- ಕಸಬಾ ಹೋಬಳಿ ಮತ್ತು ಅಂಜನಾಪುರ ಹೋಬಳಿಯ ಹೊಸಹಳ್ಳಿ ಏತ ನೀರಾವರಿ ಕಾಮಗಾರಿಗಳನ್ನು ಸಹ ಎರಡು ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು. ಈ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ
- ಜೋಗ ಜಲಪಾತ ವೀಕ್ಷಣೆಯನ್ನು ಸ್ಮರಣೀಯವಾಗಿಸಲು ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇಲ್ಲಿ 185 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 24 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸುಂದರ ಪ್ರವೇಶ ದ್ವಾರ, ಶರಾವತಿ ವಿಗ್ರಹ, ಮೂರು ಅಟ್ಟಣಿಗೆಯ ವೀಕ್ಷಣಾ ಗ್ಯಾಲರಿ, ಪಾಕಿರ್ಂಗ್, ಉಪಹಾರ ಗೃಹ, ವಿಶ್ರಾಂತಿ ಕೊಠಡಿ, ಬೋಟಿಂಗ್, ಜಲಕ್ರೀಡೆ, ಜಲಪಾತವನ್ನು ಸನಿಹದಿಂದ ನೋಡುವ ಅವಕಾಶ ಕಲ್ಪಿಸುವ ರೋಪ್ ವೇ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಒದಗಿಸುವ ಕಾಮಗಾರಿಗಳು ಹಾಗೂ ಸಕ್ಕರೆಬೈಲಿನ ಆನೆ ಬಿಡಾರ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ
- 46 ಎಕರೆ ವಿಶಾಲ ಪ್ರದೇಶದಲ್ಲಿ ಇರುವ ಶಿವಮೊಗ್ಗದ ಹಳೇ ಜೈಲು ಪ್ರದೇಶ ಈಗ ಫ್ರೀಡಂ ಪಾರ್ಕ್ ಆಗಿದೆ. ಒಟ್ಟು 5.35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿದೆ. ಫ್ರೀಡಂ ಪಾರ್ಕ್ ಕಾಂಪೌಂಡ್ ಗಳಲ್ಲಿ ಮಲೆನಾಡಿನ ಪ್ರಕೃತಿ ಸೌಂದರ್ಯ ಹಾಗೂ ಇತಿಹಾಸ ಬಿಂಬಿಸುವ ಮ್ಯೂರಲ್ ಆರ್ಟ್ ಚಿತ್ರಗಳು ಕಣ್ಮನ ಸೆಳೆಯುತ್ತಿವೆ. 482.84 ಕೋಟಿ ರೂ.ವೆಚ್ಚದ ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ
- ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಹಾಗೂ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಮಾದರಿಯಲ್ಲಿ 50 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆಯನ್ನು ಆರಂಭಿಸಲು ಕ್ರಮ ವಹಿಸಲಾಗಿದೆ.
- ಪ್ರವಾಸೋದ್ಯಮ ಕ್ಷೇತ್ರಕ್ಕೂ ಆದ್ಯತೆ ನೀಡಿದ್ದು, 205.89 ಕೋಟಿ ರೂಪಾಯಿಗಳ ವೆಚ್ಚದಲ್ಲಿ ವಿಶ್ವವಿಖ್ಯಾತ ಜೋಗದ ಜಲಪಾತ ಹಾಗೂ ಸಕ್ರೆಬೈಲಿನ ಆನೆಬಿಡಾರವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಈಗಾಗಲೆ ಚಾಲನೆ
- ನಗರದಲ್ಲಿ ನೌಕರರ ಭವನ, ಮಲವಗೊಪ್ಪದಲ್ಲಿ ಮೋಟಾರು ವಾಹನ ಚಾಲನ ಟ್ರ್ಯಾಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ
- ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳ ಸ್ಥಾಪನೆ ಉತ್ತೇಜನ ನೀಡಲಾಗಿದೆ
https://www.suddikanaja.com/2021/04/11/maintenance-problem-in-jog-falls/