ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಹಾಗೂ ಶನಿವಾರ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
READ | ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ನಿಂತ ಶಿವಮೊಗ್ಗದ 21 ಮಠಾಧೀಶರು, ಸ್ವಾಮೀಜಿಗಳ ಬೇಡಿಕೆಗಳೇನು?
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚ್ಯುವಲ್ ವೇದಿಕೆ ಮೂಲಕ ಜಿಲ್ಲೆಯ ಸುಮಾರು 1,074 ಕೋಟಿ ರೂ. ವೆಚ್ಚದ ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ ಮತ್ತು 560 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಇರುವಕ್ಕಿಯಲ್ಲಿ 155 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ವಂದಿಸಿದರು.