ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅಶೋಕ ನಗರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಶವ ಸಂಸ್ಕಾರದ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಬಳಿಕ ಶವಸಂಸ್ಕಾರ ಮಾಡಲಾಗಿದೆ.
ಅಶೋಕ ನಗರದ ಯೋಗಿ (38) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸದೇ ಅಂತ್ಯಸಂಸ್ಕಾರ ಮಾಡುತ್ತಿರುವ ಬಗ್ಗೆ ದೊಡ್ಡಪೇಟೆ ಪೊಲೀಸರಿಗೆ ಮಾಹಿತಿ ಬಂದಿದೆ. ಬಳಿಕ ಅವರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಸಾವಿಗೆ ನೇಣು ಬಿಗಿದುಕೊಂಡಿದ್ದೇ ಕಾರಣವೆಂಬ ಅಂಶ ಖಾತ್ರಿ ಆದ ಮೇಲೆ ಶವವನ್ನು ಕುಟುಂಬದವರಿಗೆ ನೀಡಲಾಗಿದೆ.
ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಯೋಗಿ ಅವರು ನೇಣು ಬಿಗಿದುಕೊಂಡಿದ್ದರು. ಬಳಿಕ ಅವರನ್ನು ರಾತ್ರೋರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಅಷ್ಟೊತ್ತಿಗಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ನಂತರ, ಕುಟುಂಬದವರು ಶವವನ್ನು ತೆಗೆದುಕೊಂಡು ಹೋಗಿದ್ದರು. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.