ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
https://www.suddikanaja.com/2021/06/16/hulikal-ghat-road-ready/
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಖಾಸಗಿ ಮತ್ತು ಕೆಎಸ್.ಆರ್.ಟಿಸಿ ಬಸ್ ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್ ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಸೂಚಿಸಿದರು.
https://www.suddikanaja.com/2021/06/12/shivamogga-airport-work-will-complete-before-june/
ಆಟೋ 20 ಕಿ.ಮೀ. ಸಂಚಾರದ ಬಗ್ಗೆ ನಿರ್ಧಾರ | ಆಟೋ ರಿಕ್ಷಾ ಪ್ರಯಾಣದ ಕನಿಷ್ಠ ದರವನ್ನು 40 ರೂಪಾಯಿಗೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಠ ದರ ಸೇರಿದಂತೆ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಅಟೋ ಪರವಾನಗಿ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಗಿ ಅಗತ್ಯವಿಲ್ಲ. ಆದರೆ, ಅದರ ಚಾಲಕರು ಸಹ ಸಮವಸ್ತ್ರ ಧರಿಸಬೇಕು. ಆಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಣ್ಣು ಕುಕ್ಕುವ ಹೆಡ್ ಲೈಟಿಗೆ ಕೊಕ್ | ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್.ಇ.ಡಿ ಹೆಡ್ ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್, ಆರ್.ಟಿ.ಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
https://www.suddikanaja.com/2020/11/20/bihar-man-found-in-sagar/