ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ಕಾಸ್ಪಾಡಿ ಕೆರೆಯಲ್ಲಿ ಶುಕ್ರವಾರ ಬೆಳಗ್ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಶಿವಮೊಗ್ಗದ ಗುರುಪುರ ನಿವಾಸಿ ದೀಪಕ್ (35) ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಸಿಗಂದೂರಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದ್ದು, ಗಾಯಗೊಂಡಿದ್ದ ದೀಪಕ್ ಮತ್ತು ಶಬರೀಶ್ ಎಂಬುವವರು ಶಿವಮೊಗ್ಗಕ್ಕೆ ಚಿಕಿತ್ಸೆಗೆಂದು ಕರೆದುಕೊಂಡು ಬರುತ್ತಿದ್ದಾಗ ದಾರಿ ಮಧ್ಯೆ ದೀಪಕ್ ಮೃತಪಟ್ಟಿದ್ದಾನೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.