ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾರಾಷ್ಟ್ರ ಮತ್ತು ಕೇರಳಾ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಕರ್ನಾಟಕದಲ್ಲೂ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಿದೆ. ಅದರಲ್ಲೂ ಹೊರ ರಾಜ್ಯಗಳಿಂದ ಬರುವವರ ಮೇಲೆ ನಿಗಾ ಇಡುವಂತೆ ಖಡಕ್ ಆದೇಶ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ಸಂಜೆ 8 ಜಿಲ್ಲೆಗಳ ಡಿಸಿಗಳೊಂದಿಗೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಸೂಚನೆಗಳನ್ನು ನೀಡಿದ್ದಾರೆ.
ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.
https://www.suddikanaja.com/2021/02/03/chain-snatching-pulsar-gang-re-active-in-shivamogga/
ಆಕ್ಸಿಜನ್ ಪೂರೈಕೆ, ಔಷಧಿ ಲಭ್ಯತೆ, ಮುನ್ನೆಚ್ಚರಿಕೆ ಕ್ರಮಗಳು, ಗಡಿ ಭಾಗಗಳಲ್ಲಿ ತಪಾಸಣೆ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.
- ಕೋವಿಡ್ ಎರಡನೇ ಅಲೆಯನ್ನು ಕಠಿಣ ಪರಿಶ್ರಮದಿಂದ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಿಯಂತ್ರಿಸಲಾಗಿದೆ. ಈಗ ಮತ್ತೆ ಪ್ರಕರಣಗಳು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
- ಅಂತರ್ ರಾಜ್ಯ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಆರ್.ಟಿ..ಪಿ.ಸಿ.ಆರ್. ನೆಗೆಟಿವ್, ಎರಡೂ ಡೋಸ್ ವ್ಯಾಕ್ಸಿನ್ ಕಡ್ಡಾಯಗೊಳಿಸಬೇಕು
- ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಬಿಗಿ ಮಾಡಿ. ಹಿರಿಯ ಅಧಿಕಾರಿಗಳನ್ನು ನಿಯೋಜಿಸಬೇಕು. ಡಿವೈಎಸ್.ಪಿ, ಉಪ ವಿಭಾಗಾಧಿಕಾರಿ, ವೈದ್ಯರು ಮತ್ತು ಇತರ ಸಿಬ್ಬಂದಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.
- ಜಿಲ್ಲಾಧಿಕಾರಿ ಮತ್ತು ಎಸ್.ಪಿ ಚೆಕ್ ಪೋಸ್ಟ್ ಗೆ ಪ್ರತಿ ಎರಡು ದಿನಕ್ಕೊಮ್ಮೆ ಭೇಟಿ ಪರಿಶೀಲಿಸಿ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಬೇಕು.
- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಬೇಕು.
- ರೈಲು ನಿಲ್ದಾಣ, ಬಂದರುಗಳಲ್ಲಿಯೂ ಕಟ್ಟೆಚ್ಚರ ವಹಿಸಬೇಕು.
- ಕೇರಳದಿಂದ ಶಿಕ್ಷಣ, ಉದ್ಯೋಗಕ್ಕೆಂದು ಪ್ರತಿದಿನ ಪ್ರಯಾಣಿಸುವವರಿಗೆ ಒಂದು ವಾರದ ಅವಧಿಗೆ ಪಾಸ್ ನೀಡುವ ವ್ಯವಸ್ಥೆ ಹಾಗೂ ಅವರಿಗೆ ಪ್ರತಿ ವಾರ ಪರೀಕ್ಷೆ ಮಾಡಿಕೊಳ್ಳುವುದು ಕಡ್ಡಾಯ ಮಾಡಬೇಕು. ಈ ಕುರಿತು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು.
- ಹೊರ ರಾಜ್ಯದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯದಲ್ಲಿಯೇ ಕ್ವಾರಂಟೈನ್ ಮಾಡಬೇಕು
- ಚಿಕಿತ್ಸಾ ಸೌಲಭ್ಯ, ಆಮ್ಲಜನಕ, ಔಷಧ ಪೂರೈಕೆಯಲ್ಲಿ ಯಾವುದೇ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು.
- ಆರೋಗ್ಯ ಸೌಲಭ್ಯಕ್ಕೆ ಅಗತ್ಯ ಇರುವ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಅವುಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು.
- ಜಿಲ್ಲೆಗಳಿಗೆ ಹಂಚಿಕೆ ಮಾಡಿರುವ ಪಿ.ಎಸ್.ಎ ಘಟಕಗಳನ್ನು ತ್ವರಿತವಾಗಿ ಅಳವಡಿಸಲು ಸೂಚಿಸಲಾಯಿತು.
- ಪಿ.ಎಸ್.ಎ ಘಟಕಗಳಿಗೆ ಅಗತ್ಯ ಸಾಮಥ್ರ್ಯದ ವಿದ್ಯುತ್ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು.
- ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ ಪಿ.ಎ.ಎಸ್.ಎ ಘಟಕ ಒಂದು ವಾರದೊಳಗೆ ಕಾರ್ಯಾರಂಭ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು
- ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗಳ ಪ್ರಮಾಣ ಹೆಚ್ಚಿಸಲಾಗುವುದು. ಪ್ರವಾಸಿಗರು ಹೆಚ್ಚಾಗಿ ಆಗಮಿಸುವ ಕಾರಣ, ಹೋಮ್ ಸ್ಟೇಗಳು, ರೆಸಾರ್ಟ್ ಗಳಲ್ಲಿ ಪರೀಕ್ಷೆ ನಡೆಸತಕ್ಕದ್ದು.
- ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮವನ್ನು ತೀವ್ರಗೊಳಿಸಬೇಕು. ಮಾಸ್ಕ್ ಧಾರಣೆ ಕಡ್ಡಾಯಗೊಳಿಸಬೇಕು.
- ಸೋಂಕು ಸಂಪರ್ಕಿತರ ಪತ್ತೆ ತೀವ್ರಗೊಳಿಸಬೇಕು
- ಗಡಿ ಪ್ರದೇಶದಲ್ಲಿ ರ್ಯಾಟ್ ಪರೀಕ್ಷೆ ಹೆಚ್ಚಿಸಬೇಕು
- ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು
- ರೆಸಾರ್ಟ್ ಗಳಲ್ಲಿ ಅತಿಥಿಗಳಿಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ವರದಿ ಕಡ್ಡಾಯಗೊಳಿಸಬೇಕು.
- ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ನಿಯಂತ್ರಣ
https://www.suddikanaja.com/2021/07/27/basavaraj-bommia-a-new-cm-of-karnataka/