ಸುದ್ದಿ ಕಣಜ.ಕಾಂ
ಸಾಗರ: ಶಿಶುವಿಗೆ ಜನ್ಮ ನೀಡಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಶ್ರೀನಗರ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಸವಿತಾ (24) ಎಂಬುವವರು ಮೃತಪಟ್ಟ ಬಾಣಂತಿ. ಸಾವಿಗೆ ನ್ಯುಮೋನಿಯಾ ಕಾರಣ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮಗುವನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಅನ್ವಯ ಮೃತಳ ಅಂತ್ಯಕ್ರಿಯೆ ನೆರವೇರಿಸಿದ್ದು, ಹೆರಿಗೆಗೂ ಮುನ್ನ ಕೋವಿಡ್ ಪರೀಕ್ಷೆಗೋಸ್ಕರ ಮಾದರಿ ಸಂಗ್ರಹಿಸಿದ್ದು, ವರದಿ ಇನ್ನೂ ಬಂದಿಲ್ಲ ಎಂದು ತಿಳಿದುಬಂದಿದೆ.