ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೀಗಾಗಿ, ಆಗಸ್ಟ್ 1 ರಿಂದ 10ರ ವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು ಎಂದು ಸೂಚಿಸಲಾಗಿದೆ.