ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆಯಾಗಿದೆ. ಇನ್ನೂ ಜಿಲ್ಲೆಯಲ್ಲಿ 772 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
https://www.suddikanaja.com/2021/06/17/corona-positivity-decline/
ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 129 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ, ಡಿಸಿಎಚ್ಸಿ 69, ಕೋವಿಡ್ ಕೇರ್ ಸೆಂಟರ್ ನಲ್ಲಿ 113, ಖಾಸಗಿ ಆಸ್ಪತ್ರೆಯಲ್ಲಿ 79, ಹೋಮ್ ಐಸೋಲೇಷನ್ ನಲ್ಲಿ 334 ಹಾಗೂ ಟ್ರಿಯೇಜ್ ಕೇಂದ್ರದಲ್ಲಿ 48 ಸೋಂಕಿತರಿದ್ದಾರೆ.
ತಾಲೂಕುವಾರು ವರದಿ | ಶಿವಮೊಗ್ಗದಲ್ಲಿ 54, ಭದ್ರಾವತಿ 13, ಶಿಕಾರಿಪುರ 3, ತೀರ್ಥಹಳ್ಳಿ 6, ಸೊರಬ 2, ಹೊಸನಗರ 4, ಸಾಗರ 11, ಬಾಹ್ಯ ಜಿಲ್ಲೆಯ 6 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
READ | ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು #AnanthnagforPadma ಅಭಿಯಾನ, ಘಟಾನುಘಟಿ ಸಿನಿ ತಾರೆಯರಿಂದ ಸಪೋರ್ಟ್
ಜಿಲ್ಲಾಡಳಿತ ಗುರುವಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಜಿಲ್ಲೆಯಲ್ಲಿ 99 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 89 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 3 ಜನ ಮೃತಪಟ್ಟಿದ್ದಾರೆ.
ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ರೋಗದ ಲಕ್ಷಣಗಳನ್ನು ಹೊಂದಿರುವ 4,671 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹಳೆಯದ್ದೂ ಸೇರಿ ಒಟ್ಟು 3,891 ವರದಿಗಳು ನೆಗೆಟಿವ್ ಇರುವುದು ದೃಢಪಟ್ಟಿದೆ.
https://www.suddikanaja.com/2021/06/24/covid-active-case-decline-in-shivamogga/