ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ಬಾಳೇಬೈಲು ಬಳಿಯ ತುಂಗಾ ನದಿಯಲ್ಲಿ ಮೃತ ದೇಹವೊಂದು ತೇಲಿ ಬಂದ ಘಟನೆ ವರದಿಯಾಗಿದೆ.
ಸಾರ್ವಜನಿಕರು ನದಿಯಲ್ಲಿನ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವವನ್ನು ಹೊರಗೆ ತೆಗೆದಿದ್ದಾರೆ. ಆದರೆ, ಮೃತರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.