ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾವತಿ ಮತ್ತು ಶಿವಮೊಗ್ಗ ಹೊರತುಪಡಿಸಿ ಎಲ್ಲ ತಾಲೂಕುಗಳಲ್ಲಿ ಕೊರೊನಾ ಸೋಂಕಿನ ಆರ್ಭಟ ಇಳಿಕೆಯಾಗಿದೆ.
ಶಿವಮೊಗ್ಗದಲ್ಲಿ36, ಭದ್ರಾವತಿ 22, ಶಿಕಾರಿಪುರ 4, ತೀರ್ಥಹಳ್ಳಿ 9, ಸೊರಬ 1, ಹೊಸನಗರ 7, ಸಾಗರ 15, ಬಾಹ್ಯ ಜಿಲ್ಲೆಯ 4 ಸೋಂಕಿತರಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಜಿಲ್ಲೆಯಲ್ಲಿ 98 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 100 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮೂರು ಜನ ಮೃತಪಟ್ಟಿದ್ದಾರೆ.
ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 141 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ, ಡಿಸಿಎಚ್ಸಿ 87, ಕೋವಿಡ್ ಕೇರ್ ಸೆಂಟರ್ ನಲ್ಲಿ 157, ಖಾಸಗಿ ಆಸ್ಪತ್ರೆಯಲ್ಲಿ 111, ಹೋಮ್ ಐಸೋಲೇಷನ್ ನಲ್ಲಿ 362 ಹಾಗೂ ಟ್ರಿಯೇಜ್ ಕೇಂದ್ರದಲ್ಲಿ 41 ಸೋಂಕಿತರಿದ್ದಾರೆ. 899 ಸಕ್ರಿಯ ಪ್ರಕರಣಗಳಿವೆ.
ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ರೋಗದ ಲಕ್ಷಣಗಳನ್ನು ಹೊಂದಿರುವ 2,999 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. 3,748 ವರದಿಗಳು ನೆಗೆಟಿವ್ ಇರುವುದು ದೃಢಪಟ್ಟಿದೆ.