ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ವೇದ, ಆಗಮ ಪಾಠ ಶಾಲೆ ಆರಂಭಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಒತ್ತಾಯಿಸಿದೆ.
ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆ ಮತ್ತು ತಾಲೂಕುಗಳಲ್ಲಿ ವೇದ, ಆಗಮಶಾಸ್ತ್ರ ಅಭ್ಯಾಸ ಮಾಡಲು ಅನೇಕ ಆಕಾಂಕ್ಷಿಗಳಿದ್ದಾರೆ. ಇದಕ್ಕೆ ಸೂಕ್ತ ಪಾಠ ಶಾಲೆ ಸಮೀಪದಲ್ಲಿ ಇಲ್ಲದ ಕಾರಣಕ್ಕೆ ವಿದ್ಯಾರ್ಥಿಗಳು ಬೇರೆಯ ಊರುಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.