ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರಾಗಿ 36 ವರ್ಷಗಳ ಸೇವೆ ಸಲ್ಲಿಸಿ, ಕಳೆದ ಮೂರು ವರ್ಷಗಳ ಕಾಲ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾಗಿ ನಿವೃತ್ತರಾದ ಡಾ. ಕೆ.ಆರ್. ಶಶಿರೇಖಾ ಅನಾರೋಗ್ಯದಿಂದ ಗುರುವಾರ ನಿಧನರಾದರು.
ಎಷ್ಟೊ ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದ ಅವರ ನಿಧನಕ್ಕೆ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್.ಎಂ.ವಾಗ್ದೇವಿ, ಡಾ. ಕೆ.ಬಿ.ಧನಂಜಯ್, ಡಾ.ಎಂ.ಕೆ.ವೀಣಾ ಎಲ್ಲ ಪ್ರಾಧ್ಯಾಪಕರು, ಉಪನ್ಯಾಸಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಶೃದ್ಧಾಂಜಲಿ ಸಲ್ಲಿಸಿದ್ದಾರೆ. ಮೃತರು ಪತಿ, ಮೂವರು ಮಕ್ಕಳು ಹಾಗೂ ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ.