ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

 

 

ಸುದ್ದಿ ಕಣಜ.ಕಾಂ
ಶಿಕಾರಿಪುರ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ, ಎನ್.ಡಿ.ಪಿ.ಎಸ್. ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಬಳ್ಳೂರು ಗ್ರಾಮ ನಿವಾಸಿ ಲೋಕೇಶ್ ನಾಯ್ಕ್(53) ಎಂಬುವವನ್ನು ಬಂಧಿಸಲಾಗಿದೆ. ಆರೋಪಿಯಿಂದ ಅಂದಾಜು 10,000 ರೂಪಾಯಿ ಮೌಲ್ಯದ ಒಟ್ಟು 475 ಗ್ರಾಂ. ತೂಕದ ಒಣ ಗಾಂಜಾ ಜಪ್ತಿ ಮಾಡಲಾಗಿದೆ. ಬಳ್ಳೂರು ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರಕಿದ್ದೇ ಶಿಕಾರಿಪುರ ಗ್ರಾಮಾಂತರ ಪಿ.ಐ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!