ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯ ಮಲೆನಾಡಿನ ತಾಲೂಕುಗಳಿಗೆ ಕಾಡುತ್ತಿರುವ ನೆಟ್ವರ್ಕ್ ಸಮಸ್ಯೆಯ ಬಗ್ಗೆ ಚರ್ಚಿಸುವುದಕ್ಕಾಗಿ ಮಹತ್ವದ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಒಂದೇ ಕಟ್ಟಡದಲ್ಲಿ 6 ಮನೆಗಳಿರುವವರಿಗೆ ಪಾಲಿಕೆ ಶಾಕ್, ಏನಿದು ಪ್ರೋರೇಟಾ ಇಲ್ಲಿದೆ ಮಾಹಿತಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಮೊಬೈಲ್ ಕಂಪೆನಿಗಳಿಂದ ಹಾಗೂ ಬಿ.ಎಸ್.ಎನ್.ಎಲ್. ಸಂಸ್ಥೆಯಿಂದ ಆಗಿರಬಹುದಾದ ಟವರ್ ನಿರ್ಮಾಣ ಮತ್ತು ತರಂಗಾಂತರಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ಸಭೆ ಯಾವಾಗ?
ಸ್ಥಳೀಯವಾಗಿ ಉಲ್ಬಣವಾಗಿರಬಹುದಾದ ಸಮಸ್ಯೆಯನ್ನು ಪರಿಹರಿಸಿ, ತುರ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಮೊಬೈಲ್ ಕಂಪೆನಿಗಳ ಮುಖ್ಯಸ್ಥರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮುಂದಿನ ಶುಕ್ರವಾರ ಬೆಂಗಳೂರಿನಲ್ಲಿ ಸಭೆ ನಡೆಸಿ, ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಅಲ್ಲದೇ, ಸಕಾಲದಲ್ಲಿ ಟವರ್ಗಳನ್ನು ನಿರ್ಮಿಸಿ, ಉತ್ತಮ ಸೇವೆಯನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.