ಶೇ.50ರ ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ, ಎಲ್ಲೆಲ್ಲಿ, ಯಾವ ಪುಸ್ತಕ ಲಭ್ಯ?

 

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://www.suddikanaja.com/2020/11/05/read-books-in-online/

ಬೆಂಗಳೂರಿನ ಕನ್ನಡ ಭವನದ ಸಿರಿಕನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿ ಕನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಪುಸ್ತಕ ಪ್ರಿಯರು ಈ ಸದವಕಾಶವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಆನ್ ಲೈನ್ ನಲ್ಲೂ ಲಭ್ಯ | ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ www.kannadapustakapradhikara.com ನಲ್ಲಿಯೂ ಈ ರಿಯಾಯಿತಿ ಸೌಲಭ್ಯ ಇದೆ. ಈ ವೆಬ್‍ ಸೈಟ್‍ ನಲ್ಲಿ ನಮ್ಮ ಪುಸ್ತಕಗಳ ವಿಭಾಗದಲ್ಲಿ ಆಯ್ಕೆ ಮಾಡಿ ಆನ್‍ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕವನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

READ | ಮಲೆನಾಡಿನ ನೆಟ್‍ವರ್ಕ್ ಬಗ್ಗೆ ಮಹತ್ವದ ಸಭೆ, ಕೈಗೊಂಡ ನಿರ್ಧಾರಗಳೇನು?

ಯಾವ ಪುಸ್ತಕಗಳು ಲಭ್ಯ | ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕಾರದ ಸಾಹಿತ್ಯ ಕೃತಿಗಳನ್ನು ಇದುವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ತಿಳಿಸಿದ್ದಾರೆ.

https://www.suddikanaja.com/2021/02/28/cm-bs-yadiyurappa-birth-day-program/

error: Content is protected !!