ಕುವೆಂಪು ವಿಶ್ವವಿದ್ಯಾಲಯದ ಆಫ್‍ಲೈನ್ ತರಗತಿಗಳು ಪುನರಾರಂಭಕ್ಕೆ ಡೇಟ್ ಫಿಕ್ಸ್, ಕ್ಲಾಸಿಗೆ ಬರುವ ಮುನ್ನ ಇದನ್ನು ಓದಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ಸೂಚನೆ ನೀಡಲಾಗಿದೆ.

READ | ಇದು ಹೆಸರಿಗಷ್ಟೇ ರಾಷ್ಟ್ರೀಯ ಹೆದ್ದಾರಿ, ಸಿಗಂದೂರು ಹೋಗುವವರಿಗೆ ನಿತ್ಯ ಸಂಕಟ, ಡೆಡ್ಲಿ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ

ಈ ಕುರಿತು ಸುತ್ತೋಲೆ ಹೊರಡಿಸಿರುವ ಕುಲಸಚಿವರು, ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಮತ್ತು ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಭೌತಿಕ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕೋವಿಡ್-19 ಸಂಬಂಧ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದ್ದಾರೆ.

ವಿವಿ ಕ್ಯಾಂಪಸ್ ಸಂಪೂರ್ಣ ಸ್ಯಾನಿಟೈಸ್ | ಸುಮಾರು ಮೂರು ತಿಂಗಳ ನಂತರ ಮುಚ್ಚಿದ್ದ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಕುವೆಂಪು ವಿವಿ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭಿಸಲಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಅನ್ವಯ ತರಗತಿ ಕೊಠಡಿಗಳು, ಹಾಸ್ಟೆಲ್ ಕೊಠಡಿಗಳು, ಪ್ರಯೋಗಾಲಯಗಳು, ಕಚೇರಿ ಸೇರಿದಂತೆ ವಿವಿಯ ಕ್ಯಾಂಪಸ್ ಅನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

READ | ಸರ್ಕಾರಿ ನೌಕರರಿಗೆ ಶೀಘ್ರವೇ ಕ್ಯಾಶ್ ಲೆಸ್ ಚಿಕಿತ್ಸೆ, ಹಳೇ ಪಿಂಚಣಿ ಯೋಜನೆಗಾಗಿ ಹೋರಾಟ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿರುವ ಕುವೆಂಪು ವಿಶ್ವವಿದ್ಯಾಲಯ, ತರಗತಿಗೆ ಹಾಜರಾಗುವಾಗ ಕನಿಷ್ಠ ಪ್ರಥಮ ಡೋಸ್ ಲಸಿಕೆ ಪಡೆಯುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ಕಾಯ್ದುಕೊಳ್ಳುವುದು, ಮತ್ತು ಸಾನಿಟೈಸರ್ ಬಳಸುವ ಮೂಲಕ ಶುಚಿತ್ವ ಕಾಪಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಕುಲಪತಿಗಳೇನು ಹೇಳುತ್ತಾರೆ | ತರಗತಿ ಪುನರಾರಂಭದ ತಯಾರಿಯ ಕುರಿತು ಮಾತನಾಡಿರುವ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ‘ಯುಜಿಸಿ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ವಿವಿ ತರಗತಿಗಳನ್ನು ಪ್ರಾರಂಭಿಸಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ಯಾಂಪಸ್ ಅನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ನಿರ್ಭೀತರಾಗಿ ಹಾಗೂ ಜಾಗೃತರಾಗಿ ತರಗತಿಗಳಿಗೆ ಹಾಜರಾಗಬಹುದು’ ಎಂದು ತಿಳಿಸಿದ್ದಾರೆ.

https://www.suddikanaja.com/2021/06/19/save-sahyadri-campus/

error: Content is protected !!